ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಹಲವೆಡೆ ಧಾರಾಕಾರ ಮಳೆಯಾಗಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಜುಲೈ 26 ಸೋಮವಾರ ಮತ್ತು 21 ರಂದು ಮಂಗಳವಾರ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಬರುವ ಸಾಧ್ಯತೆ ಇದೆ.
ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.
ಅದೇ ರೀತಿ, ದಕ್ಷಿಣ ಒಳನಾಡಿನ ಶಿವಮೊಗ್ಗ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.