ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 12 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಒಬ್ಬರು ಮೃತಪಟ್ಟಿದ್ದಾರೆ. ಇವತ್ತು 304 ಮಂದಿ ಸ್ಯಾಂಪಲ್ ಸಂಗ್ರಹಿಸಲಾಗಿದ್ದು 87 ನೆಗೆಟಿವ್ ವರದಿ ಬಂದಿದೆ. ಇವತ್ತು ಒಂದೇ ದಿನ 61 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇವತ್ತು ಒಬ್ಬರು ಸಾವನ್ನಪ್ಪಿದ್ದು ಇದುವರೆಗೆ 15 ಜನ ಮೃತಪಟ್ಟಿದ್ದಾರೆ. ಕೋವಿಡ್ ಆಸ್ಪತ್ರೆ, ಆರೈಕೆ ಕೇಂದ್ರ, ಖಾಸಗಿ ಆಸ್ಪತ್ರೆ, ಹೋಮ್ ಐಸೋಲೇಷನ್ ನಲ್ಲಿ 365 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಮೊಗ್ಗದ 4, ಭದ್ರಾವತಿ 6 ಸಾಗರ ಹಾಗೂ ಶಿಕಾರಿಪುರ ತಾಲೂಕಿನ ಒಬ್ಬರಿಗೆ ಕೊರೋನಾ ಸೋಂಕು ತಗುಲಿದೆ.