ಮುಖ್ಯಮಂತ್ರಿಗಳ ತವರು ಜಿಲ್ಲೆ ಶಿವಮೊಗ್ಗದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಇದರ ನಿಯಂತ್ರಣಕ್ಕಾಗಿ ಕೆಲ ದಿನಗಳಿಂದ ಮಧ್ಯಾಹ್ನ 2 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಸಂಪೂರ್ಣ ಲಾಕ್ಡೌನ್ ಮಾಡಲಾಗಿತ್ತು. ಆದರೆ ಇಷ್ಟಾದರೂ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ.
ಅದರಲ್ಲೂ ಶಿವಮೊಗ್ಗ ನಗರ ವ್ಯಾಪ್ತಿಗೆ ಬರುವ ವಾರ್ಡ್ ನಂಬರ್ 22, 23, 29, 30 ಹಾಗೂ 33 ರಲ್ಲಿ ಒಟ್ಟು 25 ಕಂಟೈನ್ಮೆಂಟ್ ಜೋನ್ ಗಳಿದ್ದು 87 ಸಕ್ರಿಯ ಪ್ರಕರಣಗಳಿವೆ. ಹೀಗಾಗಿ ಜಿಲ್ಲಾಡಳಿತ ಈಗ ಒಂದು ಮಹತ್ವದ ತೀರ್ಮಾನ ಕೈಗೊಂಡಿದೆ.
ಬಿ.ಎಚ್. ರಸ್ತೆ ಹಾಗೂ ಹೊಸ ತೀರ್ಥಹಳ್ಳಿ ರಸ್ತೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಜುಲೈ 23ರಿಂದ ಜುಲೈ 30ರ ವರೆಗೆ ಒಂದು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದ್ದು, ಅಗತ್ಯ ವಸ್ತುಗಳ ಸೇವೆ ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ.