ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 4764 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 75,833 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ 1780 ಜನ ಬಿಡುಗಡೆಯಾಗಿದ್ದು, ಇದುವರೆಗೆ 27,239 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 55 ಮಂದಿ ಮೃತಪಟ್ಟಿದ್ದು ಇದುವರೆಗೆ 1519 ಜನ ಸಾವನ್ನಪ್ಪಿದ್ದಾರೆ. 47,069 ಸಕ್ರಿಯ ಪ್ರಕರಣಗಳಿದ್ದು 618 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.