ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಬಡ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಬಡ್ತಿ ನೀಡುವಲ್ಲಿ ಮೀಸಲಾತಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ 2019 ರ ಏಪ್ರಿಲ್ 15ರಂದು ಆದೇಶ ಅಂಗೀಕರಿಸಲಾಗಿದ್ದು ಈ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರಿಗೆ ಈ ಕುರಿತು ಮೌಖಿಕವಾಗಿ ತಿಳಿಸಿ, ಅಂಗೀಕರಿಸಿದ ಆದೇಶ ಈಗಿನ ಯಥಾಸ್ಥಿತಿಗೆ ಅಡ್ಡಿಯಾಗುವುದಿಲ್ಲ. ನ್ಯಾಯದ ಹಿತದೃಷ್ಟಿಯಿಂದ ಮುಂದಿನ 4 ವಾರಗಳ ಬಳಿಕ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಲಾಗಿದೆ.