ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಪುತ್ರ ಅಭಿಷೇಕ್ ಬಚ್ಚನ್ ಗೆ ಕೊರೊನಾ ಚಿಕಿತ್ಸೆ ಮುಂದುವರೆದಿದೆ. ಪ್ರಸ್ತುತ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಾರದ ಹಿಂದೆಯೇ ಆಸ್ಪತ್ರೆಗೆ ದಾಖಲಾಗಿದ್ದು, ಇಬ್ಬರು ಶೀಘ್ರದಲ್ಲೇ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ.
ಮೂಲಗಳ ಪ್ರಕಾರ, ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿದೆ.
ಜುಲೈ 11 ರಂದು ಅಮಿತಾಬ್ ಮತ್ತು ಅಭಿಷೇಕ್ ಇಬ್ಬರೂ ತಮ್ಮ ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದ ಮೂಲಕ ತಮಗೆ ಕೊರೊನಾ ಬಂದಿರುವ ಬಗ್ಗೆ ಮಾಹಿತಿ ನೀಡಿದ್ದರು. ನಂತ್ರ ಆಸ್ಪತ್ರೆಗ ದಾಖಲಾಗಿದ್ದರು. ಆದ್ರೆ ನಟಿ ಐಶ್ವರ್ಯ ರೈ ಬಚ್ಚನ್ ಹಾಗೂ ಆರಾಧ್ಯ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು, ಅವ್ರ ಚಿಕಿತ್ಸೆ ಮುಂದುವರೆದಿದೆ.