ಬೆಂಗಳೂರು: ವಿಶೇಷ ಪ್ರಕರಣದಡಿ ಪಿಯುಸಿ ಉಪನ್ಯಾಸಕರ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗಿದೆ. ಸಿ ವಲಯದಲ್ಲಿ ಮೂರು ವರ್ಷ ಕಾರ್ಯನಿರ್ವಹಿಸಿರುವವರು ಮಾತ್ರ ವರ್ಗಾವಣೆಗೆ ಅರ್ಹರಾಗಿದ್ದು ಆನ್ಲೈನ್ ಮೂಲಕ ಮಾತ್ರ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಬಹುದಾಗಿದೆ.
ಹೊಸದಾಗಿ ನೇಮಕವಾಗಲಿರುವ ಉಪನ್ಯಾಸಕರಿಗೆ ಸ್ಥಳಾವಕಾಶ ಕಲ್ಪಿಸುವ ಉದ್ದೇಶದಿಂದ ಪದವಿಪೂರ್ವ ಶಿಕ್ಷಣ ಇಲಾಖೆ ವರ್ಗಾವಣೆ ಮುಂದಾಗಿದೆ. ಸಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ವಿಶೇಷ ಪ್ರಕರಣದಡಿಯಲ್ಲಿ ವರ್ಗಾವಣೆ ನಡೆಸಲಾಗುವುದು.
ಕೌನ್ಸೆಲಿಂಗ್ ಗಾಗಿ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ಜುಲೈ 28ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.