ಬೆಂಗಳೂರು: ಕೊರೋನಾ ಮಹಾಮಾರಿಯನ್ನು ಎದುರಿಸುವ ಸಲುವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಆರೋಗ್ಯ ಹಸ್ತ ಎಂಬ ವಿನೂತನ ಕಾರ್ಯಕ್ರಮವನ್ನು ಕೆಪಿಸಿಸಿ ಹಮ್ಮಿಕೊಂಡಿದೆ.
ಕಾಂಗ್ರೆಸ್ ಕೊರೋನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುವ ಪಕ್ಷದ ಕಾರ್ಯಕರ್ತರಿಗೆ ಆರೋಗ್ಯವಿಮೆ ಮಾಡಿಸಲಾಗುವುದು. ಜಿಲ್ಲಾ ಕಾಂಗ್ರೆಸ್ ಸಮಿತಿ, ಬ್ಲಾಕ್ ಕಾಂಗ್ರೆಸ್ ಸಮಿತಿ, ಶಾಸಕರು ಮತ್ತು 2018ರ ವಿಧಾನಸಭೆ ಅಭ್ಯರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಪಟ್ಟಿಯನ್ನು ಸಿದ್ಧಪಡಿಸಲು ತಿಳಿಸಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುವ ಸಲುವಾಗಿ ಸಮಿತಿಯನ್ನು ರಚಿಸಲಾಗಿದ್ದು ವಿಧಾನಸಭೆಯ ಮುಖ್ಯ ಸಚೇತಕ ಅಜಯ್ ಸಿಂಗ್ ಅಧ್ಯಕ್ಷರಾಗಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆಗ ಸುಲ್ತಾನ್, ಮಾಜಿ ಕಾರ್ಯದರ್ಶಿ ರಾಮಲಿಂಗಯ್ಯ ಸಂಚಾಲಕರಾಗಿರುತ್ತಾರೆ.