ಕೊರೊನಾ ಬಿಕ್ಕಟ್ಟಿನಲ್ಲಿ ಎದುರಾಗಿರುವ ಆರ್ಥಿಕ ಸಮಸ್ಯೆ ಕಡಿಮೆ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಮ್ಮೆ ಬಡ್ಡಿ ದರಗಳನ್ನು ಕಡಿತಗೊಳಿಸುವ ಸಾಧ್ಯತೆಯಿದೆ. ತಜ್ಞರ ಪ್ರಕಾರ, ಮುಂದಿನ ಹಣಕಾಸು ನೀತಿ ಪರಿಶೀಲನೆಯಲ್ಲಿ ಆರ್ಬಿಐ ರೆಪೊ ದರವನ್ನು ಶೇಕಡಾ 0.25 ರಷ್ಟು ಕಡಿತಗೊಳಿಸುವ ಸಾಧ್ಯತೆಯಿದೆ.
ಆರ್ಬಿಐ ಹಣಕಾಸು ನೀತಿ ಸಮಿತಿಯ ಮೂರು ದಿನಗಳ ಸಭೆ ಆಗಸ್ಟ್ 4 ರಂದು ಪ್ರಾರಂಭವಾಗಲಿದೆ. ಆಗಸ್ಟ್ 6 ರಂದು ರೆಪೋ ದರ ಇಳಿಕೆ ಪ್ರಕಟಣೆಯಾಗುವ ಸಾಧ್ಯತೆಯಿದೆ. ಕೋವಿಡ್ – 19 ಸಾಂಕ್ರಾಮಿಕ ರೋಗ ಹರಡಿದ ಕಾರಣ ಆರ್ಥಿಕತೆಗೆ ಸಂಬಂಧಿಸಿದಂತೆ ರಿಸರ್ವ್ ಬ್ಯಾಂಕ್ ನಿರಂತರ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಇದಕ್ಕೂ ಮುನ್ನ ಮಾರ್ಚ್ ಮತ್ತು ಮೇ ತಿಂಗಳಲ್ಲಿ ಎಂಪಿಸಿ ಸಭೆ ನಡೆದಿದ್ದು, ಇದರಲ್ಲಿ ರೆಪೊ ದರಗಳನ್ನು ಶೇಡಕಾ 1.15 ರಷ್ಟು ಕಡಿತಗೊಳಿಸಲಾಗಿದೆ.