ಬೆಂಗಳೂರು: ಶೇಷಾದ್ರಿಪುರಂನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಗೇಟ್ ಮುಂದೆ ಒಂದು ಗಂಟೆ ಕಾದರೂ ತಮ್ಮ ಸಂಬಂಧಿಗೆ ಚಿಕಿತ್ಸೆ ನೀಡದ ಹಿನ್ನೆಲೆಯಲ್ಲಿ ನಟಿ ಸುಧಾರಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಧಾರಾಣಿ ಅವರ ಅಣ್ಣನ ಮಗಳು ರಾತ್ರಿ ಊಟ ಮಾಡಿದ ನಂತರ ಏಕಾಏಕಿ ಕುಸಿದು ಬಿದ್ದಿದ್ದು ಆಂಬುಲೆನ್ಸ್ ನಲ್ಲಿ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆದರೆ ಆಸ್ಪತ್ರೆಯ ಒಳಗೆ ಬಿಟ್ಟುಕೊಳ್ಳದ ಸಿಬ್ಬಂದಿ ಬೆಡ್ ಖಾಲಿ ಇಲ್ಲ ಎಂದು ಉತ್ತರಿಸಿದ್ದಾರೆ.
ರಾತ್ರಿ 10 ಗಂಟೆಯಿಂದ 11 ಗಂಟೆಯವರೆಗೂ ಕಾದರೂ ಆಸ್ಪತ್ರೆ ಸಿಬ್ಬಂದಿ ಸ್ಪಂದಿಸಿಲ್ಲ. ಇದರಿಂದ ಅಸಮಾಧಾನಗೊಂಡ ನಟಿ ಸುಧಾರಾಣಿ ಅವರು ಪೊಲೀಸ್ ಆಯುಕ್ತರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಆಸ್ಪತ್ರೆಗೆ ಸೇರಿಸಿಕೊಳ್ಳಲಾಗಿದೆ. ಆಸ್ಪತ್ರೆಯ ಸಿಬ್ಬಂದಿ ವರ್ತನೆಗೆ ಸುಧಾರಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.