ದೇಶದಲ್ಲಿ ಕೊರೊನಾ ಅಬ್ಬರಿಸುತ್ತಿರುವ ಕಾರಣ ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಚಿತ್ರಮಂದಿರಗಳು ಸ್ಥಗಿತಗೊಂಡಿವೆ. ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಚಿತ್ರಮಂದಿರಗಳು ಸದ್ಯಕ್ಕೆ ತೆರೆಯುವುದಿಲ್ಲ ಎಂದು ಹೇಳಲಾಗುತ್ತಿದೆ.
ಇದರ ಮಧ್ಯೆಯೂ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಬಿಡುಗಡೆಗೊಂಡ ಪುನೀತ್ ರಾಜ್ ಕುಮಾರ್ ಪ್ರೊಡಕ್ಷನ್ ನಿರ್ಮಾಣದ ‘ಫ್ರೆಂಚ್ ಬಿರಿಯಾನಿ’ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿತ್ತು. ಚಿತ್ರದ ಕುರಿತು ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿತ್ತು.
ಇದರ ನಡುವೆ ವ್ಯಕ್ತಿಯೊಬ್ಬರು ‘ಫ್ರೆಂಚ್ ಬಿರಿಯಾನಿ’ ಚಿತ್ರವನ್ನು ತಮ್ಮ ಫೇಸ್ಬುಕ್ ಪೇಜಿನಲ್ಲಿ ಅಪ್ಲೋಡ್ ಮಾಡುವ ಮೂಲಕ ಚಿತ್ರತಂಡಕ್ಕೆ ಶಾಕ್ ನೀಡಿದ್ದಾರೆ. ಇದು ಗಮನಕ್ಕೆ ಬರುತ್ತಲೇ ತಕ್ಷಣವೇ ಆ ವ್ಯಕ್ತಿಯನ್ನು ಸಂಪರ್ಕಿಸಿದ ಚಿತ್ರತಂಡ ಇದನ್ನು ತೆಗೆಸಿ ಹಾಕಿದೆ.