ಬೆಂಗಳೂರು: ಕೊರೋನಾ ಮೊದಲಾದ ಕಾಯಿಲೆ ಇರುವ ಜನರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ ವರದಿ ಇಲ್ಲದೇ ದಾಖಲು ಮಾಡಿಕೊಳ್ಳದ ಕಾರಣ ಗಂಭೀರ ಆರೋಗ್ಯ ಸಮಸ್ಯೆ ಇರುವ ಅನೇಕ ರೋಗಿಗಳು ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ.
ಕೋವಿಡ್ ತಪಾಸಣೆ ವರದಿ ಕೇಳುತ್ತಿರುವ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆಗೆ ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಶ್ರೀರಾಮುಲು, ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಜನಸಾಮಾನ್ಯರಿಗೆ ಕೋವಿಡ್ ಪರೀಕ್ಷೆ ವರದಿ ಕೇಳದೇ ಯಾವುದೇ ಕಾಯಿಲೆಗಳಿಗೆ ಅಗತ್ಯವಾದ ಚಿಕಿತ್ಸೆ ನೀಡಬೇಕು. ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.