ಮಂಡ್ಯ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಯಡಿಯೂರಪ್ಪ ನಾಯಕತ್ವದ ಕುರಿತಾಗಿ ಬಿಜೆಪಿಯಲ್ಲಿ ಯಾವುದೇ ಅಪಸ್ವರ ಇಲ್ಲ. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ರಾಜ್ಯದ ಅಭಿವೃದ್ಧಿ ವಿಚಾರಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಭೇಟಿಗೆ ದೆಹಲಿಗೆ ತೆರಳಿದ್ದು, ಇದನ್ನು ಬೇರೆ ಅರ್ಥದಲ್ಲಿ ತಿಳಿದುಕೊಳ್ಳುವುದು ಬೇಡ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದಲ್ಲಿ ಉಂಟಾದ ಪ್ರವಾಹ ಮತ್ತು ಕೊರೊನಾ ಸೋಂಕು ಸೇರಿದಂತೆ ಹಲವಾರು ಸಮಸ್ಯೆಗಳನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.