ಕೊರೊನಾ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ ಇನ್ನೂ ತಹಬದಿಗೆ ಬಾರದ ಕಾರಣ ಆದಾಯ ತೆರಿಗೆ ಇಲಾಖೆ 2018-19 ನೇ ಸಾಲಿನ ರಿಟರ್ನ್ಸ್ ಸಲ್ಲಿಕೆ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಿದೆ.
ಈ ಹಿಂದೆ ಐಟಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೆಯ ದಿನ ಎಂದು ಪ್ರಕಟಿಸಲಾಗಿದ್ದು, ಇದೀಗ ಮತ್ತೆ 2 ತಿಂಗಳುಗಳ ಕಾಲ ಅಂದರೆ ಸೆಪ್ಟೆಂಬರ್ 30 ರವರೆಗೆ ಅವಧಿ ವಿಸ್ತರಿಸಲಾಗಿದೆ.
ವಾಡಿಕೆಯಂತೆ ಮಾರ್ಚ್ 31 ರೊಳಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡಬೇಕಾಗಿತ್ತು. ಆದರೆ ಕೊರೊನಾ ವಕ್ಕರಿಸಿದ ಪರಿಣಾಮ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಂಡ ಕಾರಣ ಇದನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿತ್ತು. ಆ ಬಳಿಕ ಜುಲೈ 31 ಎಂದು ಹೇಳಲಾಗಿದ್ದು, ಇದೀಗ ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 30 ಕ್ಕೆ ನಿಗದಿಪಡಿಸಲಾಗಿದೆ.