ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಮತ್ತೆ ನಿರಾಳತೆ ನೀಡಿದೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿಯನ್ನು ಮತ್ತೆ ಎರಡು ತಿಂಗಳುಗಳ ಕಾಲ ವಿಸ್ತರಿಸಲಾಗಿದೆ.
ಕೊರೊನಾ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ ಇನ್ನೂ ತಹಬದಿಗೆ ಬಾರದ ಕಾರಣ 2018-19 ನೇ ಸಾಲಿನ ರಿಟರ್ನ್ಸ್ ಸಲ್ಲಿಕೆ ಅವಧಿಯನ್ನು ಈಗ ಮತ್ತೊಮ್ಮೆ ವಿಸ್ತರಿಸಿದೆ.
2 ತಿಂಗಳುಗಳ ಕಾಲ ಅಂದರೆ ಸೆಪ್ಟೆಂಬರ್ 30 ರವರೆಗೆ ಅವಧಿ ವಿಸ್ತರಿಸಲಾಗಿದ್ದು, ವಾಡಿಕೆಯಂತೆ ಮಾರ್ಚ್ 31 ರೊಳಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡಬೇಕಾಗಿತ್ತು. ಆದರೆ ಕೊರೊನಾ ವಕ್ಕರಿಸಿದ ಪರಿಣಾಮ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಂಡ ಕಾರಣ ಇದನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿತ್ತು. ಆ ಬಳಿಕ ಜುಲೈ 31 ಎಂದು ಹೇಳಲಾಗಿದ್ದು, ಇದೀಗ ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 30 ಕ್ಕೆ ನಿಗದಿಪಡಿಸಲಾಗಿದೆ.