alex Certify ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ: ಮದುವೆಯಾಗುವುದಾಗಿ ಲಾಡ್ಜ್ ಗಳಿಗೆ ಕರೆದೊಯ್ದು ಲೈಂಗಿಕವಾಗಿ ಬಳಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ: ಮದುವೆಯಾಗುವುದಾಗಿ ಲಾಡ್ಜ್ ಗಳಿಗೆ ಕರೆದೊಯ್ದು ಲೈಂಗಿಕವಾಗಿ ಬಳಕೆ

ಬೆಂಗಳೂರು: ಮಹಿಳೆಯನ್ನು ಪಾರ್ಟಿಗೆ ಕರೆದೊಯ್ದ ವ್ಯಕ್ತಿಯೊಬ್ಬ ಮದ್ಯ ಕುಡಿಸಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ವೇಳೆಯಲ್ಲಿ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರು ಬನಶಂಕರಿ ಶ್ರೀನಿವಾಸನಗರದ ಮಹಿಳೆ ಕೊಡಿಗೆಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. 31 ವರ್ಷದ ವಾಸಿಂ ಪಾಷಾ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದಾನೆ. 2011 ರಲ್ಲಿ ಫೇಸ್ಬುಕ್ನಲ್ಲಿ ಪರಿಚಯವಾಗಿದ್ದ ವಾಸಿಂ ಪಾಷಾ ಚಾಟಿಂಗ್ ಮಾಡುತ್ತಿದ್ದ. ನಂತರದಲ್ಲಿ ಇಬ್ಬರ ನಡುವೆ ಗೆಳೆತನವಾಗಿ ಪ್ರೀತಿಸಿದ್ದಾರೆ.

ಸ್ನೇಹಿತನ ಮನೆಯಲ್ಲಿ ಆಯೋಜಿಸಿದ್ದ ಪಾರ್ಟಿಗೆ ಕರೆದುಕೊಂಡು ಹೋಗಿದ್ದ ಆರೋಪಿ ಬಲವಂತವಾಗಿ ಮದ್ಯ ಕುಡಿಸಿದ್ದ. ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದು, ಇದನ್ನು ಪ್ರಶ್ನಿಸಿದಾಗ ಮದುವೆಯಾಗುವುದಾಗಿ ಭರವಸೆ ನೀಡಿದ್ದಾನೆ. ಲಾಡ್ಜ್ ಗಳಿಗೆ ಕರೆದುಕೊಂಡು ಹೋಗಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. 30 ಸಾವಿರ ರೂಪಾಯಿ ಹಣ ಪಡೆದುಕೊಂಡಿದ್ದಾನೆ. ಮದುವೆಯಾಗಲು ಹೇಳಿದ್ದಕ್ಕೆ ಧರ್ಮದ ವಿಚಾರ ತೆಗೆದು ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...