ತ್ರಿಪುರಾ: ರಾಜ್ಯದ ಖೋವಾಯ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಐವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರವೆಸಗಿದ, ಕೃತ್ಯಕ್ಕೆ ಸಹಕಾರ ನೀಡಿದ ಮತ್ತು ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದ ಮೇಲೆ 10 ಮಂದಿಯನ್ನು ಬಂಧಿಸಲಾಗಿದೆ. ಇಬ್ಬರು ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೆ ಹುಡುಕಾಟ ನಡೆಸಲಾಗಿದೆ.
ತ್ರಿಪುರಾದ ಕಾಸಿಯಾಮಂಗಲ್ ಅರಣ್ಯ ಪ್ರದೇಶದಲ್ಲಿ ಜುಲೈ 21ರಂದು ಘಟನೆ ನಡೆದಿದೆ. ಸಿಪಾಹಿಜಲಾ ಜಿಲ್ಲೆಯ ವಿವಿಧ ಸ್ಥಳಗಳಿಂದ ಇಬ್ಬರನ್ನು ಬಂಧಿಸಲಾಗಿದೆ ಎಂದು ಡಿಐಜಿ ಮಾಹಿತಿ ನೀಡಿದ್ದಾರೆ. ಪರಾರಿಯಾದ ಇಬ್ಬರ ಬಂಧನಕ್ಕೆ ಬಲೆ ಬೀಸಲಾಗಿದ್ದು, ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.