ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿದ್ದು, ಇದರ ಮಧ್ಯೆಯೂ ಹಲವು ಇಲಾಖೆಗಳ ಸಿಬ್ಬಂದಿ ಜೀವದ ಹಂಗು ತೊರೆದು ಅಗತ್ಯ ಸೇವೆಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಪೈಕಿ ಕೆಎಂಎಫ್ ನೌಕರರು ಸಹ ಸೇರಿದ್ದಾರೆ.
ಇದೀಗ ಈ ನೌಕರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ 5 ಲಕ್ಷ ರೂಪಾಯಿ ವಿಮೆ ಮಾಡಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದ್ದರೂ ಸಹ ಇದನ್ನು ಲೆಕ್ಕಿಸದೆ ಮನೆಮನೆಗೆ ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಸಂಸ್ಥೆಯ ನೌಕರರು ತಲುಪಿಸುತ್ತಿದ್ದಾರೆ. ಹೀಗಾಗಿ ಇವರುಗಳಿಗೆ ಕೋವಿಡ್ ಆರೋಗ್ಯ ವಿಮೆ ಮಾಡಿಸಲು ನಿರ್ಧರಿಸಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.