ದೇಶದ ಜನತೆಯನ್ನು ಬಿಡದಂತೆ ಕಾಡುತ್ತಿರುವ ಕೊರೊನಾ ಮಹಾಮಾರಿ ಈಗಾಗಲೇ ಹಲವರ ಜೀವವನ್ನು ಬಲಿ ಪಡೆದಿದೆ. ಕರ್ನಾಟಕದಲ್ಲೂ ಕೊರೊನಾ ಅಬ್ಬರಿಸುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದೆ.
ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತಿಮ ದರ್ಶನವನ್ನೂ ಸಹ ಪಡೆಯಲು ಕುಟುಂಬ ಸದಸ್ಯರು ಹಲವೆಡೆ ಹಿಂದೇಟು ಹಾಕುತ್ತಿರುವುದು ಕಂಡುಬಂದಿದೆ. ಹೀಗಾಗಿ ಕೊರೊನಾ ವಾರಿಯರ್ಸ್ ಗಳೇ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ನೆರವೇರಿಸುತ್ತಿದ್ದಾರೆ.
ಹೀಗೆ ಅಂತ್ಯಕ್ರಿಯೆ ನೆರವೇರಿಸುವ ವೇಳೆ ಬೆಳಗಾವಿ ಮಹಾನಗರಪಾಲಿಕೆ ವೈದ್ಯಾಧಿಕಾರಿ ಡಾ. ಬಸವರಾಜ ದಬಾಡೆ, ಭಾವುಕರಾಗಿ ಕಣ್ಣೀರಿಟ್ಟಿದ್ದು ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಕುರಿತು ಮಾತನಾಡಿರುವ ಅವರು, ಕುಟುಂಬ ಸದಸ್ಯರಿದ್ದರೂ ಸಹ ಅನಾಥ ಶವಗಳಂತೆ ಇವರುಗಳ ಅಂತ್ಯಸಂಸ್ಕಾರ ಮಾಡುವಾಗ ದುಃಖವಾಗುತ್ತದೆ ಎಂದು ಹೇಳಿದ್ದಾರೆ.