ಬೆಂಗಳೂರು: ಗುಟ್ಕಾ ಪ್ಯಾಕೇಟ್ ಗಳಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿರುವ ಪ್ರಕರಣ ಕಂಡು ಬರುತ್ತಿದ್ದು ಗುಟ್ಕಾ ಮಾರಾಟ ನಿಷೇಧಿಸಲು ಕ್ರಮಕೈಗೊಳ್ಳುವಂತೆ ರಾಜ್ಯಪಾಲ ವಜುಭಾಯಿ ವಾಲಾ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ವೇಳೆಯಲ್ಲಿ ರಾಜ್ಯಪಾಲರು ಈ ಕುರಿತು ಸಲಹೆ ನೀಡಿದ್ದಾರೆ. ಗುಟ್ಕಾ ಮತ್ತು ಪಾನ್ ಮಸಾಲ ಪ್ಯಾಕೆಟ್ ಗಳ ಮಾರಾಟ ದಂಧೆ ನಡೆಯುತ್ತಿದ್ದು ಅವುಗಳನ್ನು ನಿಷೇಧಿಸಬೇಕೆಂದು ರಾಜ್ಯಪಾಲರು ಸಲಹೆ ನೀಡಿದ್ದು ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು.
ಅಗತ್ಯವಾದರೆ ಸುಗ್ರೀವಾಜ್ಞೆ ತಂದು ಗುಟ್ಕಾ ನಿಷೇಧಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ ಎನ್ನಲಾಗಿದೆ.