ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ ಹಣ ಜಮಾ ಮಾಡಲಾಗುವುದು.
ಮೊದಲ ಬಾರಿಗೆ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿಸುವ ಯೋಜನೆ ಇದಾಗಿದ್ದು, ಕಿಸಾನ್ ಸಮ್ಮಾನ್ ಯೋಜನೆಯ ಆರನೇ ಕಂತು ಶೀಘ್ರವೇ ರೈತರ ಖಾತೆಗೆ ಪಾವತಿಯಾಗಲಿದೆ.
ಆಗಸ್ಟ್ 1 ರಿಂದ 31 ರ ವರೆಗೆ ಕಿಸಾನ್ ಸಮ್ಮಾನ್ ಯೋಜನೆ ನೊಂದಾಯಿತ ರೈತರ ಬ್ಯಾಂಕ್ ಖಾತೆಗೆ ಹಣ ಪಾವತಿ ಮಾಡಲಾಗುವುದು ಎಂದು ಯೋಜನೆಯ ಸಿಇಒ ವಿವೇಕ್ ಅಗರ್ ವಾಲ್ ತಿಳಿಸಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ 20 ಸಾವಿರ ಕೋಟಿ ರೂಪಾಯಿ ನೀಡಿದ್ದು, ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುವುದು.