ಮುಂಬೈ: ಕೊರೊನಾ ಸೋಂಕು ತಗುಲಿದ್ದರಿಂದ ಜುಲೈ 11 ರಿಂದ ಆಸ್ಪತ್ರೆಯಲ್ಲಿದ್ದ ಹಿರಿಯ ನಟ ಅಮಿತಾಬ್ ಬಚ್ಚನ್ ಡಿಸ್ಚಾರ್ಜ್ ಆಗಿದ್ದಾರೆ.
ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದ ಹಿನ್ನೆಲೆಯಲ್ಲಿ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 11 ರಿಂದ ಆಸ್ಪತ್ರೆಯಲ್ಲಿದ್ದ ಅವರಿಗೆ ಆರೋಗ್ಯದಲ್ಲಿ ಚಿಕಿತ್ಸೆ ಬಳಿಕ ಚೇತರಿಕೆ ಕಂಡುಬಂದಿದ್ದು, ಕೊರೊನಾ ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ನಾನಾವತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.
ಅಮಿತಾಬ್ ಬಚ್ಚನ್ ಅವರೊಂದಿಗೆ ಪುತ್ರ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯಾ ರೈ, ಮೊಮ್ಮಗಳು ಆರಾಧ್ಯ ಅವರಿಗೂ ಕೊರೊನಾ ಪಾಸಿಟಿವ್ ವರದಿ ಬಂದಿತ್ತು. ಚಿಕಿತ್ಸೆ ನಂತರ ಎಲ್ಲರೂ ಗುಣಮುಖರಾಗಿದ್ದಾರೆ.