ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಯಾವುದೇ ರೋಗ ಲಕ್ಷಣವಿಲ್ಲ. ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ ಆಸ್ಪತ್ರೆಯಲ್ಲಿ ಸಿಎಂ ಚಿಕಿತ್ಸೆ ಪಡೆಯುತ್ತಿದ್ದು ತಜ್ಞ ವೈದ್ಯರು ಅವರಿಗೆ ಸೂಕ್ತ ಚಿಕಿತ್ಸೆ ನೀಡಿದ್ದಾರೆ.
ಸಿಎಂಗೆ ರೋಗ ಲಕ್ಷಣವಿಲ್ಲ. ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಅವರ ಆರೋಗ್ಯ ಸ್ಥಿರವಾಗಿದೆ. ಆಸ್ಪತ್ರೆಯ ಎದುರು ಬ್ಯಾರಿಕೇಡ್ ಅಳವಡಿಸಿ, ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.