alex Certify ಬೆಂಗಳೂರು 1497, ಮೈಸೂರಿನಲ್ಲಿ 372 ಜನರಿಗೆ ಸೋಂಕು, 13 ಮಂದಿ ಸಾವು – ಯಾವ ಜಿಲ್ಲೆಯಲ್ಲಿ ಎಷ್ಟು…? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು 1497, ಮೈಸೂರಿನಲ್ಲಿ 372 ಜನರಿಗೆ ಸೋಂಕು, 13 ಮಂದಿ ಸಾವು – ಯಾವ ಜಿಲ್ಲೆಯಲ್ಲಿ ಎಷ್ಟು…? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 4752 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು 1497, ಮೈಸೂರು 372, ಬಳ್ಳಾರಿ 305, ಬಾಗಲಕೋಟೆ 209 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಧಾರವಾಡ 191, ಕಲಬುರ್ಗಿ 170, ಕೊಪ್ಪಳ 157, ಶಿವಮೊಗ್ಗ 155, ದಕ್ಷಿಣಕನ್ನಡ 153, ಮಂಡ್ಯ 152, ಹಾಸನ 131, ಉಡುಪಿ 126, ತುಮಕೂರು 122, ರಾಯಚೂರು 115, ಗದಗ 100, ಹಾವೇರಿ 99, ವಿಜಯಪುರ 92 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಯಾದಗಿರಿ 86, ರಾಮನಗರ 68, ಬೆಳಗಾವಿ 60, ಚಿಕ್ಕಬಳ್ಳಾಪುರ 58, ಚಾಮರಾಜನಗರ 52, ಬೀದರ್ 50, ಚಿಕ್ಕಮಗಳೂರು 46, ದಾವಣಗೆರೆ 41, ಕೋಲಾರ 40, ಕೊಡಗು 39, ಚಿತ್ರದುರ್ಗ 33, ಉತ್ತರಕನ್ನಡ 31, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಬೆಂಗಳೂರಿನಲ್ಲಿ ಇಂದು 27 ಜನ ಮೃತಪಟ್ಟಿದ್ದಾರೆ. ಮೈಸೂರು 13, ಧಾರವಾಡ8, ಕಲಬುರಗಿ 5, ದಕ್ಷಿಣ ಕನ್ನಡ 7, ಹಾಸನ 5, ಬೆಳಗಾವಿ ಜಿಲ್ಲೆಯಲ್ಲಿ 10 ಜನ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಇಂದು 98 ಮಂದಿ ಸಾವನ್ನಪ್ಪಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...