ಅಯೋಧ್ಯೆ ಶ್ರೀ ರಾಮ ಜನ್ಮಭೂಮಿಯಲ್ಲಿ ನಾಳೆ ಮಧ್ಯಾಹ್ನ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗುವುದು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಅಯೋಧ್ಯ ನಗರಿಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲೆ ಆನಂದಿಬೆನ್ ಪಟೇಲ್, ಶ್ರೀ ರಾಮ್ ಮಂದಿರ್ ಟ್ರಸ್ಟ್ ಅಧ್ಯಕ್ಷ ನಿತ್ಯ ಗೋಪಾಲದಾಸ್ ಅವರೊಂದಿಗೆ ಮೋಹನ್ ಭಾಗವತ್ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಅಯೋಧ್ಯೆಯಲ್ಲಿ ಭಾರಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಇಡೀ ನಗರವನ್ನು ಶೃಂಗರಿಸಲಾಗಿದ್ದು, ಆಯೋಧ್ಯ ನಗರಿ ಕಂಗೊಳಿಸುತ್ತಿದೆ.