ನವದೆಹಲಿ: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಶಿವಾಜಿ ರಾವ್ ಪಾಟೀಲ್ ನೀಲಂಗೇಕರ್(91) ಪುಣೆಯಲ್ಲಿ ಬುಧವಾರ ನಿಧನರಾಗಿದ್ದಾರೆ.
ಜುಲೈನಲ್ಲಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಚಿಕಿತ್ಸೆ ಪಡೆದುಕೊಂಡಿದ್ದರು. ಹಿರಿಯ ಕಾಂಗ್ರೆಸ್ ನಾಯಕರಾದ ಶಿವಾಜಿರಾವ್ ಪಾಟೀಲ್ ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದ ಅವರು 1995 -96 ರಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದರು.