ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ನೈರುತ್ಯ ಮುಂಗಾರು ಮಾರುತಗಳು ಭಾರೀ ಪ್ರಬಲವಾಗಿದ್ದು ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಅದೇ ರೀತಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ಕೆಲವು ದಿನಗಳ ಕಾಲ ಈ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.