ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ.
ಹವಾಮಾನ ಇಲಾಖೆ ವರದಿಯ ಅನ್ವಯ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಲಿದೆ. ಇದೇ ರೀತಿ ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ.
ಧಾರವಾಡ, ಹಾವೇರಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ ಎಂದು ಹೇಳಲಾಗಿದೆ. ಮೈಸೂರು, ದಾವಣಗೆರೆ, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.