ಮಂಗಳಮುಖಿಯರಿಗೆ ಸಿಹಿ ಸುದ್ದಿ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಸರ್ಕಾರಿ ನೇಮಕಾತಿಗಳಲ್ಲಿ ಮಂಗಳಮುಖಿಯರಿಗೆ ಮೀಸಲು ಕಲ್ಪಿಸುವ ಸಂಬಂಧ ಕರಡು ನಿಯಮ ಸಿದ್ಧವಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆಗೊಳ್ಳುವ ನಿರೀಕ್ಷೆಯಿದೆ.
ರಾಜ್ಯ ಹೈಕೋರ್ಟ್ ಗೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಈ ವಿಷಯ ತಿಳಿಸಿದ್ದು, ‘ಟ್ರಾನ್ಸ್ಜೆಂಡರ್ ನೀತಿ 2017’ರ ಕರಡನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲು ಮುಂದಾಗಿದ್ದರೂ ಅದು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.
ಹೀಗಾಗಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕರಡು ನಿಯಮ ಅನುಮೋದನೆಗೊಳ್ಳುವುದು ಬಹುತೇಕ ನಿಶ್ಚಿತವಾಗಿದೆ. ಲೈಂಗಿಕ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಯೊಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಗೆ ಅಡ್ವೋಕೇಟ್ ಜನರಲ್ ಈ ಮಾಹಿತಿ ನೀಡಿದ್ದಾರೆ.