
ಹುಬ್ಬಳ್ಳಿ ನಗರದ ಶಾಪಿಂಗ್ ಮಾಲ್ ಒಂದರಲ್ಲಿ ಪ್ರೇಮಿಗಳು ಅಸಭ್ಯವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಹುಬ್ಬಳ್ಳಿಯ ಪ್ರತಿಷ್ಠಿತ ಮಾಲ್ ಒಂದರಲ್ಲಿ ಯುವಕ-ಯುವತಿ ಮುತ್ತು ಕೊಟ್ಟು ಅಸಭ್ಯವಾಗಿ ವರ್ತಿಸಿದ್ದಾರೆ. ಈ ದೃಶ್ಯವನ್ನು ಸೆರೆ ಹಿಡಿದವರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ವಿಡಿಯೋ ವೈರಲ್ ಆಗಿದ್ದು, ಮಾಲ್ ನಲ್ಲಿ ಮೈಮರೆತು ಯುವಜೋಡಿ ಅಸಭ್ಯವಾಗಿ ವರ್ತಿಸಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.