ನವದೆಹಲಿ: ಯುದ್ಧ ಪರಿಸ್ಥಿತಿ ಎದುರಿಸಲು ಸಿದ್ಧರಾಗುವಂತೆ ಪೂರ್ವ, ಪಶ್ಚಿಮ ಮತ್ತು ಉತ್ತರ ಕಮಾಂಡರ್ ಗಳಿಗೆ ಸೂಚನೆ ನೀಡಲಾಗಿದೆ.
ಚೀನಾಗೆ ಠಕ್ಕರ್ ಕೊಡಲು ಭಾರತ ಮುಂದಾಗಿದೆ. ಗಡಿಯಿಂದ ಚೀನಾ ಸೇನೆ ಇನ್ನೂ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಯುದ್ಧಕ್ಕೆ ಸನ್ನದ್ಧವಾಗಿರುವಂತೆ ಭಾರತ ಸೇನಾ ಮುಖ್ಯಸ್ಥರು ಕಮಾಂಡರ್ ಗಳಿಗೆ ಸೂಚನೆ ನೀಡಿದ್ದಾರೆ.
ಎಂತಹುದೇ ಸನ್ನಿವೇಶ ಬಂದರೂ ಸಿದ್ಧರಾಗಿರುವಂತೆ, ಯುದ್ಧ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರುವಂತೆ ಮಹತ್ವದ ಸೂಚನೆ ನೀಡಲಾಗಿದೆ. ಪೂರ್ವ, ಪಶ್ಚಿಮ ಮತ್ತು ಉತ್ತರ ಕಮಾಂಡರ್ ಗಳಿಗೆ ಈ ಕುರಿತಾಗಿ ಸೂಚನೆ ನೀಡಲಾಗಿದೆ.
ಚೀನಾದೊಂದಿಗೆ ನಡೆಯುತ್ತಿರುವ ಗಡಿ ಉದ್ವಿಗ್ನತೆ ನಡುವೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರಾವಣೆ ಯಾವುದೇ ಸಂಭವನೀಯ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರುವಂತೆ ಕಮಾಂಡರ್ ಗಳಿಗೆ ಸೂಚನೆ ನೀಡಿದ್ದಾರೆ.
ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರಬೇಕು, ಹೆಚ್ಚಿನ ಕಾರ್ಯಾಚರಣೆಗೆ ಸಿದ್ಧತೆ ಕಾಯ್ದುಕೊಳ್ಳಬೇಕು ಎಂದು ಅರುಣಾಚಲಪ್ರದೇಶದಲ್ಲಿ ಚೀನಾ ಗಡಿಗೆ ಹೊಂದಿಕೊಂಡಿರುವ ತೇಜ್ ಪುರಕ್ಕೆ ಭೇಟಿ ನೀಡಿದ್ದ ಅವರು ತಿಳಿಸಿದ್ದಾರೆ.
ಸೇನೆಯ ಹಿರಿಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಅವರು, ಈ ಕುರಿತಾಗಿ ಸೂಚನೆ ನೀಡಿದ್ದಾರೆ. ಗಡಿರೇಖೆಯ ಬಳಿ ಚೀನಾ ಸೈನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದು, ಈ ಹಿನ್ನೆಲೆಯಲ್ಲಿ ಭಾರತದಿಂದ ಪರಿಸ್ಥಿತಿ ಎದುರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಸೇನಾ ಮುಖ್ಯಸ್ಥರು ಕಮಾಂಡರ್ ಗಳಿಗೆ ಸನ್ನದ್ಧರಾಗಿರುವಂತೆ ಸೂಚನೆ ನೀಡಿರುವುದು ಭಾರೀ ಗಮನ ಸೆಳೆದಿದೆ ಎನ್ನಲಾಗಿದೆ.