ದುಬೈ: ಮುಂದಿನ ವರ್ಷ ಭಾರತದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಈ ಮೊದಲು ನಿರ್ಧಾರವಾದ ವೇಳಾಪಟ್ಟಿಯಂತೆ ಮುಂದಿನ ವರ್ಷ ಭಾರತದಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದ್ದು ಆಸ್ಟ್ರೇಲಿಯಾದಲ್ಲಿ ಈ ವರ್ಷ ಅಕ್ಟೋಬರ್ ನಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಟೂರ್ನಿ 2022 ರಲ್ಲಿ ನಡೆಸಲಾಗುವುದು.
2021 ರಲ್ಲಿ ಎರಡು ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ, ಈ ಗೊಂದಲಕ್ಕೆ ಐಸಿಸಿ ತೆರೆ ಎಳೆದಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದ್ದು, ಕ್ರಿಕೆಟ್ ಆಸ್ಟ್ರೇಲಿಯಾ ಸಮಿತಿಗೆ 2022 ರಲ್ಲಿ ಟಿ20 ವಿಶ್ವಕಪ್ ಟೂರ್ನಿಯನ್ನು ಆಯೋಜಿಸಲು ಅನುಮತಿ ನೀಡಲಾಗಿದೆ. ನಿಗದಿಯಂತೆಯೇ 2021 ರಲ್ಲಿ ಭಾರತದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ನ್ಯೂಜಿಲೆಂಡ್ ನಲ್ಲಿ ಮುಂದಿನ ವರ್ಷ ನಡೆಯಬೇಕಿದ್ದ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯನ್ನು ಒಂದು ವರ್ಷ ಮುಂದೂಡಿಕೆ ಮಾಡಲಾಗಿದೆ.