ರಾಮನಗರ: ನೀರಿನ ಸಂಪ್ ಗೆ ಬಿದ್ದು ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.
ವಿಜಯಪುರ ಮೂಲದ ರವಿ ಬಿರಾದಾರ(25) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಕಳೆದ ಎರಡು ದಿನದಿಂದ ನಾಪತ್ತೆಯಾಗಿದ್ದ ಕಾನ್ ಸ್ಟೇಬಲ್ ರವಿ ಅವರ ಮೃತದೇಹ ಸಂಪ್ ನಲ್ಲಿ ಕಂಡುಬಂದಿದೆ. ಅವರಿಗಾಗಿ ಹುಡುಕಾಟ ನಡೆಸಿದಾಗ ಶವವಾಗಿ ಕಂಡುಬಂದಿದ್ದಾರೆ ಎನ್ನಲಾಗಿದೆ. ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.