ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿ ಅವರ ಅಳಿಯನ ‘ಸ್ಪರ್ಶ’ ಆಸ್ಪತ್ರೆಗೆ ದಾಖಲಾಗಿದ್ದಾರೆ.
5 ದಿನಗಳ ಹಿಂದೆ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಬಳಿಕ ಶಾಸಕ ಶಾಮನೂರು ಶಿವಶಂಕರಪ್ಪನವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.
ಇದೀಗ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದ್ದು, ಯಾವುದೇ ರೋಗ ಗುಣಲಕ್ಷಣಗಳು ಇಲ್ಲದೆ ಇದ್ದರೂ ಮುಂಜಾಗೃತಾ ಕ್ರಮವಾಗಿ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.