ಬೆಂಗಳೂರು: ಆರೋಗ್ಯ ಖಾತೆ ಸಚಿವ ಬಿ. ಶ್ರೀರಾಮುಲು ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಜನಪ್ರತಿನಿಧಿಗಳಿಗೆ ಕೊರೋನಾ ಸೋಂಕು ತಗುಲಿದೆ. ಹಲವು ಸಚಿವರು ಸೇರಿದಂತೆ ಅನೇಕ ಜನಪ್ರತಿನಿಧಿಗಳಿಗೆ ಕೊರೊನಾ ಸೋಂಕು ತಗುಲಿದೆ.
ಈಗ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇವತ್ತು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಅವರಿಗೆ ಪಾಸಿಟಿವ್ ವರದಿ ಬಂದಿದೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲ ಇಲಾಖೆಗಳು ಜೀವದ ಹಂಗುತೊರೆದು ಮಹಾಮಾರಿಯ ವಿರುದ್ಧ ಹಗಲಿರುಳು ಶ್ರಮಿಸುತ್ತಿದೆ ಎಂದು ಶ್ರೀರಾಮುಲು ಹೇಳಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.