ಬೆಂಗಳೂರು: ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರು ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಗೆ ದಾಖಲಾದ ಶ್ರೀರಾಮುಲು ಕೊರೊನಾ ಚಿಕಿತ್ಸೆ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಅನೇಕ ಜನಪ್ರತಿನಿಧಿಗಳಿಗೆ ಕೊರೊನಾ ಸೋಂಕು ತಗಲಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿವ ಶ್ರೀರಾಮುಲು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕು ತಗುಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾದ ಮೊದಲ ರಾಜಕಾರಣಿ ಸಚಿವ ಶ್ರೀರಾಮುಲು ಎಂದು ಹೇಳಲಾಗಿದೆ.