ಬೆಂಗಳೂರು: 10 ದಿನಗಳ ಚಿಕಿತ್ಸೆ ಬಳಿಕ ಸಂಪೂರ್ಣ ಗುಣಮುಖರಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಕೊರೋನಾ ಪಾಸಿಟಿವ್ ವರದಿ ಬಂದಿದ್ದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಇಂದು ಬೆಳಿಗ್ಗೆ ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಬಂದಿದ್ದು ನಾಳೆ ಆಸ್ಪತ್ರೆಯಿಂದ ಅವರು ಬಿಡುಗಡೆಯಾಗಲಿದ್ದಾರೆ.
ನಾಳೆಗೆ ಅವರು ಆಸ್ಪತ್ರೆಗೆ ದಾಖಲಾಗಿ 10 ದಿನವಾಗಲಿದೆ. ಸಂಪೂರ್ಣವಾಗಿ ಗುಣಮುಖರಾಗಿರುವ ಸಿಎಂ ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಲಾಗಿದೆ.