ಬೆಂಗಳೂರು: ಕೊರೋನಾ ಸೋಂಕಿನ ನಡುವೆ ತೀವ್ರ ವಿರೋಧ ವ್ಯಕ್ತವಾದ್ರೂ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಬಗ್ಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಇನ್ನು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡ 71.8 ರಷ್ಟು ಫಲಿತಾಂಶ ಪ್ರಕಟವಾಗಿದ್ದು ಗ್ರಾಮೀಣ ಪ್ರದೇಶದ ಮಕ್ಕಳು, ಬಾಲಕಿಯರು ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆಯಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಮೊದಲ ಸ್ಥಾನ ಪಡೆಯುವ ಮೂಲಕ ದಾಖಲೆ ಬರೆದಿದೆ.
6 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸುವ ಮೂಲಕ ಫಸ್ಟ್ ರ್ಯಾಂಕ್ ಬಂದಿದ್ದಾರೆ. ಬೆಂಗಳೂರು ಸೆಂಟ್ ಮೇರಿಸ್ ಪ್ರೌಢಶಾಲೆಯ ಕೆ.ಎಸ್. ಚಿರಾಯು, ಸುಬ್ರಹ್ಮಣ್ಯದ ಕುಮಾರಸ್ವಾಮಿ ಪ್ರೌಢಶಾಲೆಯ ಅನುಶ್ ಎ.ಎಲ್., ಶಿರಸಿಯ ಸರ್ಕಾರಿ ಮಾರಿಕಾಂಬ ಪಿಯು ಕಾಲೇಜಿನ ಸನ್ನಿಧಿ ಮಹಾಬಲೇಶ್ವರ ಹೆಗಡೆ, ಮಂಡ್ಯದ ಶ್ರೀ ಸತ್ಯಸಾಯಿ ಸರಸ್ವತಿ ಶಾಲೆಯ ಧೀರಜ್ ರೆಡ್ಡಿ, ಬೆಂಗಳೂರು ಪೂರ್ಣಪ್ರಜ್ಞ ಶಿಕ್ಷಣ ಕೇಂದ್ರದ ನಿಖಿಲೇಶ್, ಚಿಕ್ಕಮಗಳೂರಿನ ಸೆಂಟ್ ಜೋಸೆಫ್ ಕಾನ್ವೆಂಟ್ ಹೈಸ್ಕೂಲ್ ನ ತನ್ಮಯಿ ಮೊದಲ ರ್ಯಾಂಕ್ ಪಡೆದಿದ್ದಾರೆ.