ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಭೆಯ ನಂತರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಮಾರ್ಗಸೂಚಿ ಅನ್ವಯ ಕೆಜಿ ಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ಬೆಂಗಳೂರು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದು ಹೇಳಲಾಗಿದೆ.