
ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಮತ್ತೆ ಹಲವು ಆರೋಪಿತರನ್ನು ಪೊಲೀಸರು ಬಂಧಿಸಿದ್ದಾರೆ.
ಕೆಜಿ ಹಳ್ಳಿಯಲ್ಲಿ 50 ಹಾಗೂ ಡಿಜೆ ಹಳ್ಳಿಯಲ್ಲಿ 34 ಮಂದಿ ಸೇರಿದಂತೆ 84 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ 290 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.
ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಗಲ್ಲಿಗಲ್ಲಿಗಳಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಾತ್ರಿ 12 ಗಂಟೆಯಿಂದ ಬೆಳಗಿನ ಜಾವದವರೆಗೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಎಸಿಪಿ ರವಿಪ್ರಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ವಿಡಿಯೋಗಳ ಪರಿಶೀಲನೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.