ಚೆನ್ನೈ: ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಐಸಿಯುನಲ್ಲಿ ಲೈಫ್ ಸಪೋರ್ಟ್(ಜೀವರಕ್ಷಕ ಸಾಧನಗಳ) ಮೂಲಕ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ನುರಿತ ವೈದ್ಯರ ತಂಡದಿಂದ ಬಾಲಸುಬ್ರಹ್ಮಣ್ಯಂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಹಳ ಜಾಗರೂಕತೆಯಿಂದ ಮಾನಿಟರಿಂಗ್ ಮಾಡಲಾಗುತ್ತಿದೆ. ಬಾಲಸುಬ್ರಹ್ಮಣ್ಯಂ ಅವರಿಗೆ ಡಾ. ಅನುರಾಧ ಭಾಸ್ಕರನ್ ಚಿಕಿತ್ಸೆ ನೀಡುತ್ತಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಚೆನ್ನೈ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್ಪಿಬಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಹೇಳಲಾಗಿತ್ತು. ಆದರೆ, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ತಂದೆ ನಿನ್ನೆಯ ಹಾಗೆಯೇ ಕ್ರಿಟಿಕಲ್ ಕಂಡಿಷನ್ ನಲ್ಲಿ ಇದ್ದಾರೆ. ನಿಮ್ಮ ಪ್ರೀತಿ ಪ್ರಾರ್ಥನೆಗೆ ಎಲ್ಲರಿಗೂ ಧನ್ಯವಾದಗಳು. ಅವರು ಬೇಗನೆ ಗುಣಮುಖರಾಗುತ್ತಾರೆ ಎಂದು ಎಸ್ಪಿಬಿ ಪುತ್ರ ಚರಣ್ ವಿಡಿಯೋ ಸಂದೇಶ ನೀಡಿದ್ದಾರೆ. ಕೊರೋನಾ ಸೋಂಕು ತಗುಲಿದ ಎಸ್ಪಿಬಿ ಆಗಸ್ಟ್ 5 ರಿಂದ ಆಸ್ಪತ್ರೆಯಲ್ಲಿದ್ದಾರೆ.