ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಷ್ಟದ ಅಂದಾಜು ಮಾಡಲಾಗಿದೆ.
ಇದುವರೆಗಿನ ಲೆಕ್ಕದ ಪ್ರಕಾರ 9 ಕೋಟಿ 50 ಲಕ್ಷ ರೂ.ಗೂ ಹೆಚ್ಚು ನಷ್ಟವಾಗಿದೆ. ಆಸ್ತಿ ಪಾಸ್ತಿ ನಷ್ಟ, ವಾಹನಗಳ ನಷ್ಟಗಳ ಬಗ್ಗೆ ಅಂದಾಜು ಹಾಕಲಾಗಿದೆ. ಸದ್ಯ ದಾಖಲಾಗಿರುವ ಎಫ್ಐಆರ್ ಗಳ ಅನ್ವಯ ಲೆಕ್ಕ ಹಾಕಲಾಗಿದೆ. ಮುಂದಿನ ದಿನಗಳಲ್ಲಿ ನಷ್ಟದ ಅಂದಾಜು ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗಿದೆ.
ಬೆಂಗಳೂರಿನ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಈ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ. ಸುಮಾರು 10 ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಿದ್ದು ನಷ್ಟದ ಮೊತ್ತ ಇನ್ನೂ ಹೆಚ್ಚಾಗಬಹುದು. ಗಲಭೆಯಲ್ಲಿ ಆಗಿರುವ ನಷ್ಟದ ವರದಿ ನೀಡಲು ಪ್ರತ್ಯೇಕ ತಂಡ ರಚಿಸಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ದಾಖಲಾಗಿರುವ ಎಫ್ಐಆರ್ ಗಳನ್ನು ಅನ್ವಯ ನಷ್ಟದ ಅಂದಾಜನ್ನು ಪಟ್ಟಿಮಾಡಲಾಗಿದೆ ಎಂದು ಹೇಳಲಾಗಿದೆ.