ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ವಿಚಾರಣೆ ಸಿಬಿಐ ಕೈಗೆ ಬಂದಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲಿದೆ ಎಂದು ನ್ಯಾಯಾಲಯ ಹೇಳಿದೆ.
ಸುಶಾಂತ್ ಆತ್ಮಹತ್ಯೆ ಪ್ರಕರಣದಲ್ಲಿ ಗಂಭೀರ ಆರೋಪ ಎದುರಿಸುತ್ತಿರುವ ಸುಶಾಂತ್ ಗೆಳತಿ ಮತ್ತು ನಟಿ ರಿಯಾ ಚಕ್ರವರ್ತಿಗೆ ಇದ್ರಿಂದ ಹಿನ್ನಡೆಯಾಗಿದೆ. ಪಾಟ್ನಾದಲ್ಲಿ ದಾಖಲಾಗಿದ್ದ ಎಫ್‌ಐಆರ್ ನ್ನು ಮುಂಬೈಗೆ ವರ್ಗಾಯಿಸುವಂತೆ ರಿಯಾ ಅರ್ಜಿ ಸಲ್ಲಿಸಿದ್ದಳು. ಈ ಅರ್ಜಿ ವಜಾಗೊಳಿಸಿದ ಸುಪ್ರೀಂ, ಸಿಬಿಐ ತನಿಖೆ ನಡೆಸಲಿದೆ ಎಂದಿದೆ.
ಸುಪ್ರೀಂ ಕೋರ್ಟ್ ತೀರ್ಪಿನಿಂದ ಮಹಾರಾಷ್ಟ್ರ ಸರ್ಕಾರ ಮತ್ತು ಮುಂಬೈ ಪೊಲೀಸರಿಗೂ ದೊಡ್ಡ ಹಿನ್ನಡೆಯಾಗಿದೆ. ಮಹಾರಾಷ್ಟ್ರ ಸರ್ಕಾರ, ಸುಪ್ರೀಂಕೋರ್ಟ್ ತೀರ್ಪನ್ನು ಸಂವಿಧಾನ ಪೀಠದಲ್ಲಿ ಪ್ರಶ್ನಿಸುವ ಸಾಧ್ಯತೆಯಿದೆ. ಪ್ರಕರಣದ ವಿಚಾರಣೆಯನ್ನು ಆಗಸ್ಟ್ 11ರಂದು ಮುಗಿಸಿದ್ದ ಸುಪ್ರೀಂ ಕೋರ್ಟ್ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು.