ನವದೆಹಲಿ: ಕಳೆದ ಮಾರ್ಚ್ ನಿಂದ ಬಂದ್ ಆಗಿರುವ ಸಿನಿಮಾ ಮಂದಿರಗಳ ಪುನಾರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆಯಿದೆ.
ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಅನ್ಲಾಕ್ 4.0 ರಲ್ಲಿ ದೇಶಾದ್ಯಂತ ಸಿನಿಮಾ ಮಂದಿರ ಪುನರಾರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಸೆಪ್ಟೆಂಬರ್ ನಿಂದ ಸಿನಿಮಾ ಮಂದಿರ ಆರಂಭವಾಗಬಹುದು ಎಂದು ಹೇಳಲಾಗಿದೆ.
ಷರತ್ತುಗಳೊಂದಿಗೆ ರೆಸ್ಟೋರೆಂಟ್, ಜಿಮ್, ಮಾಲ್ ಗಳನ್ನು ತೆರೆಯಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು ಮುಂದಿನ ಹಂತದಲ್ಲಿ ಚಿತ್ರಮಂದಿರ ಪುನರಾರಂಭಕ್ಕೆ ಅನುಮತಿ ನೀಡುವ ಸಾಧ್ಯತೆ ಇದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸೇಷನ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಚಿತ್ರಮಂದಿರಗಳ ಆರಂಭಕ್ಕೆ ಅವಕಾಶ ನೀಡಬಹುದಾಗಿದೆ ಎಂದು ಹೇಳಲಾಗಿದೆ.