ಬಿಹಾರ ವಿಧಾನಸಭೆ ಚುನಾವಣೆಯ ಹೊತ್ತಲ್ಲಿ ಮಹಾ ಮೈತ್ರಿಕೂಟದಲ್ಲಿ ಬಿರುಕು ಮೂಡಿದೆ. ಮಾಜಿ ಮುಖ್ಯಮಂತ್ರಿ ಜಿತಿನ್ ರಾಮ್ ಮಾಂಝಿ ನೇತೃತ್ವದ ಹೆಚ್ಎಎಂ – ಎಸ್ ಪಕ್ಷ ಮಹಾಮೈತ್ರಿಕೂಟದಿಂದ ಹೊರಬಿದ್ದಿದೆ.
ವಿಧಾನಸಭೆ ಚುನಾವಣೆ ವೇಳೆಗೆ ಹೆಚ್ಎಎಂ – ಎಸ್ ಪಾರ್ಟಿ ಜೆಡಿಯು ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬಹುದು ಇಲ್ಲವೇ ವಿಲೀನ ಆಗಬಹುದು ಎಂದು ಹೇಳಲಾಗಿದೆ. ಈ ಬೆಳವಣಿಗೆಯಿಂದಾಗಿ ಬಿಹಾರ ವಿಧಾನಸಭೆ ಚುನಾವಣೆಗೆ ಮೊದಲೇ ಮಹಾ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದೆ.
ಈ ಬೆಳವಣಿಗೆ ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮಾಜಿ ಸಿಎಂ ಜಿತಿನ್ ರಾಮ್ ಮಾಂಝಿ ನೇತೃತ್ವದ ಹೆಚ್ಎಎಂ – ಎಸ್ ಮೈತ್ರಿ ತೊರೆಯುವುದಾಗಿ ಘೋಷಿಸಿದೆ. ಜೆಡಿಯು ಸೇರ್ಪಡೆಯಾಗಲು ಪಕ್ಷ ಸಜ್ಜಾಗಿದ್ದು ಒಂದೆರಡು ದಿನಗಳಲ್ಲಿ ಈ ಬಗ್ಗೆ ಪ್ರಕಟಣೆ ಹೊರಬೀಳಲಿದೆ.
ಪಕ್ಷದ ಕಾರ್ಯಕಾರಿ ಸಮಿತಿ ಸಭೆ ಸೇರಿ ಮುಂದಿನ ತೀರ್ಮಾನ ಕೈಗೊಳ್ಳಲಿದೆ. ಮುಂದಿನ ತೀರ್ಮಾನ ಕೈಗೊಳ್ಳಲು ಪಕ್ಷದ ನೇತಾರ ಮಾಂಝಿ ಅವರ ವಿವೇಚನೆಗೆ ಬಿಡಲಾಗಿದೆ. ರಾಜಕೀಯದಲ್ಲಿ ಏನಾದರೂ ಆಗಬಹುದು ಎಂದು ಪಕ್ಷದ ವಕ್ತಾರ ಡ್ಯಾನಿಶ್ ರಿಜ್ವಾನ್ ಹೇಳಿದ್ದಾರೆ. ಒಂದು ಕಾಲದಲ್ಲಿ ಸಿಎಂ ನಿತೀಶ್ ಕುಮಾರ್ ಅವರನ್ನು ಟೀಕಿಸಿದ್ದ ಮಾಂಝಿ ಬಿಹಾರ ಸರ್ಕಾರ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.