alex Certify ವೈದ್ಯಾಧಿಕಾರಿ ಆತ್ಮಹತ್ಯೆ: ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ, ಉದ್ಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯಾಧಿಕಾರಿ ಆತ್ಮಹತ್ಯೆ: ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ, ಉದ್ಯೋಗ

ಬೆಂಗಳೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಸಿಎಂ ಯಡಿಯೂರಪ್ಪ ಡಾ. ನಾಗೇಂದ್ರ ಅವರ ನಿಧನದಿಂದ ದುಃಖವಾಗಿದೆ. ಘಟನೆಯ ಬಗ್ಗೆ ವಿಷಾದಿಸುತ್ತೇನೆ. ನೋವು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 30 ಲಕ್ಷ ರೂಪಾಯಿ ನೀಡುವ ಜೊತೆಗೆ ಅವರ ಕುಟುಂಬಕ್ಕೆ ಉದ್ಯೋಗ ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ತಾಲ್ಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಅವರ ಸಾವಿನ ನೋವು ಒಬ್ಬ ವೈದ್ಯನಾಗಿ ನನಗೆ ಅರ್ಥವಾಗುತ್ತದೆ. ಕಷ್ಟಕಾಲದಲ್ಲಿ ನಾಗೇಂದ್ರ ಜನಪರ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಸಾವಿನ ತನಿಖೆಗೆ ಆದೇಶಿಸಲಾಗಿದೆ. ಕುಟುಂಬಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...