alex Certify ಗೌರಿ – ಗಣೇಶ ಹಬ್ಬಕ್ಕೆ ಸರ್ಕಾರದಿಂದ ಭರ್ಜರಿ ಗಿಫ್ಟ್: 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೌರಿ – ಗಣೇಶ ಹಬ್ಬಕ್ಕೆ ಸರ್ಕಾರದಿಂದ ಭರ್ಜರಿ ಗಿಫ್ಟ್: 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ

ಬೆಂಗಳೂರು: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ರಾಜ್ಯದ ಕೊಳಗೇರಿಯಲ್ಲಿ ವಾಸವಾಗಿರುವ ಮೂರು ಲಕ್ಷ ಕುಟುಂಬಗಳಿಗೆ ಸರ್ಕಾರ ಕೊಡುಗೆ ನೀಡಿದೆ.

ಸ್ಲಂ ನಿವಾಸಿಗಳಿಗೆ ಸರ್ಕಾರದಿಂದ ಕೊಡುಗೆ ನೀಡಲಾಗಿದ್ದು, 1873 ಕೊಳಚೆ ಪ್ರದೇಶಗಳ 6745 ಎಕರೆ ಹಂಚಿಕೆ ಮಾಡಲಾಗಿದೆ. ಸುಮಾರು 16 ಲಕ್ಷ ಕೊಳಗೇರಿ ನಿವಾಸಿಗಳಿಗೆ ಪ್ರಯೋಜನ ಸಿಗಲಿದೆ. ಮೂರು ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ವಸತಿ ಸಚಿವ ಸೋಮಣ್ಣ ಕಳೆದ ಆರು ತಿಂಗಳಿಂದ ವಿವಿಧ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿ ಸಂಪುಟದ ಅನುಮೋದನೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಹಬ್ಬದ ವೇಳೆಯಲ್ಲೇ ಸ್ಲಂ ನಿವಾಸಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ರಾಜ್ಯದ ವಿವಿಧ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಗಳಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳ ಮಾಲೀಕತ್ವದಲ್ಲಿರುವ 1873 ಕೊಳಚೆ ಪ್ರದೇಶಗಳ ಸುಮಾರು 3.13 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುವುದು ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...