ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 24ರಂದು ಪೂರ್ವಭಾವಿ ಪರೀಕ್ಷೆ ನಡೆಸುತ್ತಿದೆ.
ಈ ಪರೀಕ್ಷೆ ಬರೆಯಲಿರುವ ಅಂಧ ಅಭ್ಯರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಹೈಕೋರ್ಟ್ ಆದೇಶದಂತೆ ಈ ಅಭ್ಯರ್ಥಿಗಳಿಗೆ ಪ್ರತಿ ಗಂಟೆಗೆ 20 ನಿಮಿಷ ಹೆಚ್ಚುವರಿ ಸಮಯ ನಿಗದಿಪಡಿಸಿ ಕೆ.ಪಿ.ಎಸ್.ಸಿ. ಪ್ರಕಟಣೆ ಹೊರಡಿಸಿದೆ.
ಅಲ್ಲದೆ ಲಿಪಿಕಾರರನ್ನು ಕರೆದುಕೊಂಡು ಬರಲು ಸಾಧ್ಯವಿಲ್ಲದ ಅಭ್ಯರ್ಥಿಗಳು ಮುಂಚಿತವಾಗಿ ಮಾಹಿತಿ ನೀಡಿದರೆ ಅಂತಹ ಅಭ್ಯರ್ಥಿಗಳಿಗೆ ಆಯೋಗದಿಂದಲೇ ಲಿಪಿಕಾರರನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.