ಬೆಂಗಳೂರು: ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಕುರಿತಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಪ್ರದೇಶದ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ಬೀದರ್, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.