
ಶ್ರೀಲಂಕಾದ ವೇಗದ ಬೌಲರ್ ಲಸಿತ್ ಮಾಲಿಂಗ ಐಪಿಎಲ್ ನಲ್ಲಿ ತಮ್ಮ ಮುಂಬೈ ಇಂಡಿಯನ್ಸ್ ತಂಡದ ಆರಂಭದ ಪಂದ್ಯಗಳಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ.
ಲಸಿತ್ ಮಾಲಿಂಗ ಅವರ ತಂದೆಗೆ ಆರೋಗ್ಯದ ಸಮಸ್ಯೆ ಇರುವ ಕಾರಣ ಅವರು ಆರಂಭಿಕ ಪಂದ್ಯಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ.
ಮುಂದಿನ ವಾರ ಅವರ ತಂದೆಗೆ ಶಸ್ತ್ರ ಚಿಕಿತ್ಸೆ ಇದೆ. ಹಾಗಾಗಿ ಅವರು ಶ್ರೀಲಂಕಾದಲ್ಲಿ ಇರುತ್ತಾರೆ ಎಂದು ಹೇಳಲಾಗಿದೆ.